ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಿರುದ್ಯೋಗ ಯುವತಿಯರಿಗೆ, ಮಹಿಳೆಯರಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ವತಿಯಿಂದ ಮಹಿಳಾ ಉದ್ಯೋಗ ಕೋಶವನ್ನು ತೆರೆಯಲಾಗಿದೆ.
ಜಿಲ್ಲೆಯ 18 ರಿಂದ 35 ವರ್ಷದೊಳಗಿನ ಉದ್ಯೋಗ ಮಾಡಲು ಆಸಕ್ತಿ ಇರುವ ಯುವತಿಯರು ಮತ್ತು ಮಹಿಳೆಯರು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂ:206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಇಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:- 080-29787445 ಹಾಗೂ 9945768967 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































