ಬೆಂಗಳೂರು: ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್ಐ ಸಾವಿತ್ರಿಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ವ್ಯಕ್ತಿಯೊಬ್ಬರಿಂದ 1.25 ಲಕ್ಷ ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.!