ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತದೆ.
ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಮದುವೆಯ ದಿನಾಂಕದಿಂದ 6 ತಿಂಗಳ ಒಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಒಂದು ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.

































