ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್ ಹೀರೋ, ಪ್ಯಾನ್ ಇಂಡಿಯಾ ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಜೋಡಿಗೆ 8ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ. ಇದೇ ಸಂಭ್ರಮದಲ್ಲಿ ನಟಿ ರಾಧಿಕಾ ಪಂಡಿತ್ ಪತಿ ಯಶ್‌ಗೆ ವಿಶ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಾಧಿಕಾ ಪಂಡಿತ್ ಅವರು, ದಾಂಪತ್ಯ ಎಂದಿಗೂ ಇಬ್ಬರೂ ಪರಿಪೂರ್ಣ ವ್ಯಕ್ತಿಗಳಿಂದ ಅಲ್ಲ. ಇಬ್ಬರೂ ತದ್ವೀರುದ್ಧ ವ್ಯಕ್ತಿಗಳು ಪರಸ್ಪರ ಬಿಟ್ಟು ಕೊಡಲು ನಿರಾಕರಿಸಿದಾಗ ಎಂದು ನಟಿ ಬರೆದುಕೊಂಡಿದ್ದಾರೆ. ನನ್ನ ಪ್ರೀತಿಯ ಪತಿಗೆ ೮ನೇ ವಿವಾಹ ಮಹೋತ್ಸವದ ಶುಭಾಶಯಗಳು ಎಂದು ಶುಭಕೋರಿದ್ದಾರೆ.
ಯಶ್ ಹಾಗೂ ರಾಧಿಕಾ ಅವರು 2016ರ ಡಿ.9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳು ಇದ್ದಾರೆ. ಇನ್ನು ರಾಧಿಕಾ ಹಾಗೂ ಯಶ್‌ಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.