ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮೋದಿ ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ನವರು ಯಾಕೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಮುಂದುವರಿದು, ರಾಹುಲ್ ಗಾಂಧಿ ಅವನ್ಯಾವ ನಾಯಕ ರೀ. ರಾಹುಲ್ ಗಾಂಧಿಯನ್ನು ಮೋದಿಗೆ ಸಮ ಎನ್ನಲು ಸಾಧ್ಯವೇ?. ವಿಶ್ವವೇ ಕೊಂಡಾಡುತ್ತಿರುವ ಮೋದಿ ಎಲ್ಲಿ? ಕಾಂಗ್ರೆಸ್ ಪಕ್ಷ ಎಲ್ಲಿ? ಎಂದು ಬಿಎಸ್‌ವೈ ಹೇಳಿದ್ದಾರೆ.!