ಲಖನೌ : 2034ರ ವೇಳೆಗೆ ಏಕಕಾಲದಲ್ಲಿ ಚುನಾವಣೆ ನಡೆಯುವುದು ನಿಜವಾಗಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲಖನೌನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಭಿಯಾನ ನಡೆಯಬೇಕು. ಈ ಕುರಿತ ಟೀಕೆಗಳಿಗೆ, ಇದು ನಮ್ಮ ದೇಶ, ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ರಾಜಕೀಯ ಸ್ಥಿರತೆ ನಮ್ಮ ಪ್ರಯೋಜನಕ್ಕಾಗಿ ಎಂದು ಹೇಳಿ. ನೀವು ಈ ಉತ್ತರವನ್ನು ನೀಡಿ ಸಾಮೂಹಿಕ ಜಾಗೃತಿ ಅಭಿಯಾನವನ್ನು ಮುನ್ನಡೆಸಿದರೆ, 2034ರ ಹೊತ್ತಿಗೆ ಏಕಕಾಲದಲ್ಲಿ ಚುನಾವಣೆ ನಡೆಯುವುದು ನಿಜವಾಗಲಿವೆ ಎಂದರು.
ಸಾಮಾಜಿಕ ಮಾಧ್ಯಮಗಳಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಭಿಯಾನ ನಡೆಸುವಂತೆ ಕರೆ ನೀಡಿದ ಅವರು, 1952 ಮತ್ತು 1967ರ ನಡುವೆ ಏಕಕಾಲದಲ್ಲಿ ಚುನಾವಣೆಗಳು ನಡೆದವು. ಆದರೆ, ಕಾಂಗ್ರೆಸ್‌ನಲ್ಲಿನ ಆಂತರಿಕ ಬಿರುಕುಗಳಿಂದಾಗಿ ಆ ಪದ್ಧತಿ ಕೊನೆಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಕನಸನ್ನು ನನಸಾಗಿಸಲು ಶ್ರಮಿಸುತ್ತಿದ್ದಾರೆ. ‘ರಾಷ್ಟ್ರ ಮೊದಲು’ ಎಂಬ ಮಂತ್ರದಿಂದ ಮಾರ್ಗದರ್ಶಿಸಲ್ಪಟ್ಟ ಎಲ್ಲರೂ ಏಕಕಾಲದಲ್ಲಿ ಚುನಾವಣೆಗಳನ್ನು ಬೆಂಬಲಿಸುತ್ತಾರೆ ಎಂದು ಎಂದು ತಿಳಿಸಿದರು.