ಮಂಡ್ಯ: ನಾಳೆ ಏಪ್ರಿಲ್ 26ರಂದು ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ, ಬಳಿಕ ಭರ್ಜರಿ ರೋಡ್ ಶೋ ನಡೆಸುವ ಸಾಧ್ಯತೆಯಿದ ಎಂದು ವರದಿಯಾಗಿದೆ.
ಮುಂದಿನ ವಿಧಾನ ಸಭೆ ಚುನಾವಣೆಗೆ ರಾಜ್ಯ ರಾಜಕೀಯಲ್ಲಿ ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಈ ನಡುವೆ ಏಪ್ರಿಲ್ 26ರಂದು ರಾಜ್ಯದ ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಮತದಾರರ ಸೆಳೆಯಲಿದ್ದಾರೆ. ಮಂಡ್ಯ ಜಿಲ್ಲೆಯಾದ್ಯಂತ ರಸ್ತೆಯುದ್ದಕ್ಕೂ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.