ಮಂಡ್ಯ: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ರಾಮಚಂದ್ರು(21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಿಲೆಟಿನ್ ಸ್ಫೋಟದ ರಭಸಕ್ಕೆ ಯುವಕನ ಹೊಟ್ಟೆ ಭಾಗವೇ ಛಿದ್ರ ಛಿದ್ರವಾಗಿದೆ. ಅಪ್ರಾಪ್ತೆಯ ಪ್ರೀತಿಗೆ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.