ನವದೆಹಲಿ : ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಯೂಟ್ಯೂಬರ್ ರಣವೀರ್ ಅಲಹಬಾದಿಯಾ ಅಶ್ಲೀಲ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್ ನಟಿ ರಾಖಿ ಸಾವಂತ್ಗೆ ಮಹಾರಾಷ್ಟ್ರ ಸೈಬರ್ ಪೊಲೀಸರು ಸಮನ್ಸ್ ನೀಡಿದ್ದಾರೆ.
ಫೆ.27 ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವಂತೆ ರಾಖಿ ಸಾವಂತ್ಗೆ ಸಮನ್ಸ್ ನೀಡಿದ್ದಾರೆ. ಇದರೊಂದಿಗೆ ರಣವೀರ್ ಅಲಹಬಾದಿಯಾ, ಸಮಯ್ ರೈನಾ, ಆಶಿಶ್ ಚಂಚಲಾನಿ, ಅಪೂರ್ವ ಮುಖಿಜಾ ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಇತರ ಪ್ಯಾನಲಿಸ್ಟ್ಗಳಿಗೂ ವಿಚಾರಣೆಗೆ ಹಾಜರಾಗಲು ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ನಡೆದಿದ್ದ ಇಂಡಿಯಾಸ್ ಗಾಟ್ ಟ್ಯಾಲೆಂಡ್ ಕಾರ್ಯಕ್ರಮದಲ್ಲಿ ರಾಖಿ ಸಾವಂತ್ ಅತಿಥಿಯಾಗಿ ಭಾಗವಹಿಸಿದ್ದರು. ಈ ಹಿನ್ನೆಲೆ ರಾಖಿ ಸಾವಂತ್ಗೆ ಸಮನ್ಸ್ ನೀಡಲಾಗಿದೆ.