ಅಮರಾವತಿ : ಆಂಧ್ರಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ 3,200 ಕೋಟಿ ಮದ್ಯ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ವೈಎಸ್‌ಆರ್‌ಸಿಪಿ ಸಂಸದ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.’
ಮಂಗಳಗಿರಿಯಲ್ಲಿರುವ ಸಿಐಡಿ ಕಚೇರಿಯಲ್ಲಿ ಸಂಸದರನ್ನು ಸುಮಾರು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಎಸ್‌ಐಟಿ ಅಧಿಕಾರಿಗಳು ಅವರ ಕುಟುಂಬದ ಸದಸ್ಯರಿಗೆ ಅವರ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು.
ರವಿವಾರ ವಿಜಯವಾಡದ ಸ್ಥಳೀಯ ನ್ಯಾಯಾಲಯದ ಮುಂದೆ ರೆಡ್ಡಿಯನ್ನು ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ. ಮದ್ಯ ಹಗರಣ ಪ್ರಕರಣದಲ್ಲಿ 4ನೇ ಆರೋಪಿ ಎಂದು ಮಿಧುನ್ ರೆಡ್ಡಿ ಅವರನ್ನು ಹೆಸರಿಸಲಾಗಿತ್ತು. ಶನಿವಾರ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಎಸ್‌ಐಟಿ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ.