Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಏಪ್ರಿಲ್ 18ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ವೈ ಎಸ್ ವಿ ದತ್ತಾ ನಾಮಪತ್ರ ಸಲ್ಲಿಕೆ.!

0

 

ಚಿಕ್ಕಮಗಳೂರು: ಮಾಜಿ ಶಾಸಕ ವೈ ಎಸ್ ವಿ ದತ್ತಾ ಅವರು ಮತ್ತೆ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಅಲ್ಲದೇ ಅವರು ಜೆಡಿಎಸ್ ಪಕ್ಷದಿಂದ ಕಡೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ವೈಎಸ್ ವಿ ದತ್ತಾ ನಿವಾಸಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಭೇಟಿಯಾಗಿ ಅವರನ್ನು ಮನವೊಲಿಸಿದರು. ಅಂತಿಮವಾಗಿ ಮನವೊಲಿಕೆಯಲ್ಲಿ ಯಶಸ್ವಿಕೂಡ ಆಗಿದ್ದಾರೆ.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು, ವೈಎಸ್ ವಿ ದತ್ತಾ ಅವರು ಕಡೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಕೆ ದಿನ ದೇವೇಗೌಡರು ಆಗಮಿಸಲಿದ್ದಾರೆ ಎಂದರು.

ಈ ಬಳಿಕ ಮಾತನಾಡಿದಂತ ಮಾಜಿ ಶಾಸಕ ವೈ ಎಸ್ ವಿ ದತ್ತಾ, ಏಪ್ರಿಲ್ 18ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಈ ತೀರ್ಮಾನ ಮಾಡಿದ್ದೇನೆ ಎಂಬುದಾಗಿ ತಿಳಿಸಿದರು.

Leave A Reply

Your email address will not be published.