ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ಈಗಾಗಲೇ ಅಂಚೆ ಮತದಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಗ್ಗೆ 8:52 ರ ಹೊತ್ತಿಗೆ ಎನ್‌ಡಿಎ 304, ಐಎನ್‌ಡಿಐಎ 167 ಹಾಗೂ ಇತರೆ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 4 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನದ ಹೊತ್ತಿಗೆ ಎಲ್ಲ ಕ್ಷೇತ್ರದ ಫಲಿತಾಂಶದ ಸಂಪೂರ್ಣ ಚಿತ್ರಣ ಹೊರಬರಲಿದೆ.