ಬೆಂಗಳೂರು: ಮುಂದಿನ ಐದಾರು ದಿನ ದಕ್ಷಿಣ ಒಳನಾಡು, ಉತ್ತರ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಲಿದೆ ಏಕೆಂದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಅಕ್ಟೋಬರ್ 13 ರಂದು ಹೆಚ್ಚಿನ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.


































