ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ:01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 02.08.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
