ಉತ್ತರಾಖಂಡ: ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.1 ರಷ್ಟು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಡೆಹ್ರಾಡೂನ್‌ನಿಂದ 140 ಕಿಮೀ ದೂರ..ನೆಲದಿಂದ 5 ಕಿಮೀ ಆಳದಲ್ಲಿತ್ತು.
ಭೂಕಂಪದಿಂದ ಪ್ರಾಣಹಾನಿ ಅಥವಾ ಆಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿದಿನ ಭೂಕಂಪಗಳು ಸಂಭವಿಸುತ್ತಿದ್ದು, ಇದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.