ಬಾಲಿವುಡ್ ಬೆಡಗಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಇದೀಗ ಇಂದಿರಾ ಗಾಂಧಿ ಕುರಿತ ಸಿನಿಮಾ ‘ಎಮರ್ಜೆನ್ಸಿ’ ಬರೋದು ಯಾವಾಗ? ಎನ್ನುವವರಿಗೆ ಸಿಹಿಸುದ್ದಿ ನೀಡಿದ್ದಾರೆ. ಸೆಪ್ಟೆಂಬರ್ 6ರಂದು ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ಮಾಡೋದಾಗಿ ಕಂಗನಾ ಘೋಷಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವದ ಕರಾಳ ಅಧ್ಯಾಯಕ್ಕೆ 50 ವರ್ಷವಾದ ಹಿನ್ನೆಲೆಯಲ್ಲಿ ‘ಎಮರ್ಜೆನ್ಸಿ’ ಚಿತ್ರದ ರಿಲೀಸ್ ಡೇಟ್ ಘೋಷಿಸುತ್ತಿದ್ದೇನೆ. ಸ್ವಾತಂತ್ರ್ಯ ಭಾರತದ ಅತ್ಯಂತ ವಿವಾದಾತ್ಮಕ ನಿರ್ಣಯದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ, ಇಂದಿರಾ ಗಾಂಧಿ ಪಾತ್ರಕ್ಕೆ ಕಂಗನಾ ಜೀವ ತುಂಬಿದ್ದು, ಈ ಚಿತ್ರಕ್ಕೆ ನಿರ್ದೇಶನದ ಜೊತೆ ನಿರ್ಮಾಣ ಕೂಡ ಮಾಡ್ತಿದ್ದಾರೆ. ಈ ಸಿನಿಮಾದ ನಂತರ ಕಂಗನಾ ಬಾಲಿವುಡ್ಗೆ ಗುಡ್ ಬೈ ಹೇಳ್ತಾರಾ? ಕಾದುನೋಡಬೇಕಿದೆ.
