ಕೊಲ್ಕತ್ತಾ: ಏಕರೂಪ ನಾಗರಿಕ ಸಂಹಿತೆಯನ್ನು ಕೆಲವು ರಾಜ್ಯಗಳು ಅನುಷ್ಠಾನಗೊಳಿಸಲು ಪ್ರಾರಂಭಿಸಿವೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಏಕರೂಪ ನಾಗರೀಕ ಸಂಹಿತೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ ಕುರಿತ ಸಮಾವೇಶದಲ್ಲಿ ಸಚಿವರು ಮಾತನಾಡಿದರು. ಬಿಜೆಪಿ ಪ್ರಣಾಳಿಕೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಪ್ರಸ್ತಾಪಿಸಲಾಗಿದೆ. ಉತ್ತರಾಖಂಡ, ಗೋವಾದಂತಹ ರಾಜ್ಯಗಳು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಪ್ರಾರಂಭಿಸಿದ್ದು, ಕೇಂದ್ರದ ಸಮ್ಮಿಶ್ರ ಸರ್ಕಾರ ಬಲಿಷ್ಠವಾಗಿದೆ. ಇದರ ಬಗ್ಗೆ ಚಿಂತಿಸಬೇಕಿಲ್ಲ. ಹೊಸ ಕಾನೂನು ಜಾರಿಗೆ ಅಡ್ಡಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
				
															
                    
                    
                    
                    
                    































