ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ದಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ನವೆಂಬರ್ 24ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


































