ಮುಂಬೈ:ಕರವಾಳಿ ಬೆಡಗಿ ಪೂಜಾ ಹೆಗ್ಡೆಸೌತ್, ಬಾಲಿವುಡ್ ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಪೂಜಾ ಹೆಗ್ಡೆ ಮದುವೆಗೆ ಸಜ್ಜಾಗಿದ್ದಾರೆ. ಖ್ಯಾತ ಕ್ರಿಕೆಟಿಗನ ಜೊತೆ ಹೊಸ ಬಾಳಿಗೆ ಕಾಲಿಡಲಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೊಂದು ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜಾನಾ? ಈ ಬಗ್ಗೆ ನಟಿ ಕೂಡ ಯಾವುದೇ ಸ್ಪಷ್ಟನೆ ನೀಡಿಲ್ಲ.
ಚಿತ್ರರಂಗದಲ್ಲಿ ಪೂಜಾ ಹೆಗ್ಡೆಗೆ ಐರೆನ್ ಲೆಗ್ ಎಂದು ಕರೆಯುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳ ಸೋಲಿನ ಬೆನ್ನಲ್ಲೇ ಹಸೆಮಣೆ ಏರಲು ರೆಡಿಯಾದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.
ಕರಾವಳಿ ಕುವರಿ ಪೂಜಾ, ಸೌತ್- ಬಾಲಿವುಡ್ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಹೊಸ ಸಿನಿಮಾ ಆಫರ್‌ಗಾಗಿ ಎದುರು ನೋಡ್ತಿದ್ದಾರೆ.