ಹುಬ್ಬಳ್ಳಿ: ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್. ಸಂತೋಷ್ ಹೇಳಿಕೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಪಕ್ಷದಲ್ಲಿರುವ ಶಾಸಕರನ್ನು,ಮಾಜಿ ಶಾಸಕರನ್ನು ಉಳಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ. ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿರೋದು. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.