ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಮೋದಿ ಮೂರನೇ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿಲ್ಲ, ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಸುಳ್ಳು ಹೇಳಿ ದೆಹಲಿಗೆ ಶೋಕಿ ಮಾಡಲು ಕಾಂಗ್ರೆಸ್ ನಾಯಕರು ಹೋಗಿದ್ದಾರೆ. ರಾಜ್ಯಕ್ಕೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಸರ್ಕಾರ, ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.