ಚಾಮರಾಜನಗರ: ಕೊಳ್ಳೆಗಾಲ ಕಾಂಗ್ರೆಸ್ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತಕ್ಕೆ ಒಳಗಾಗಿದ್ದು, ಕಾರಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಡರಾತ್ರಿ ಮೈಸೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಶಾಸಕರು ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಮೈಸೂರಿನ ಹೊರವಲಯದ ನಾಡನಹಳ್ಳಿ ಬಳಿ ಟೈರ್ ಬ್ಲಾಸ್ಟ್ ಆಗಿದೆ.
ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಶಾಸಕರೂ ಸೇರಿ ಕಾರಿನಲ್ಲಿದ್ದವರು ಸುರಕ್ಷಿತರಾಗಿದ್ದಾರೆ.
 
				 
         
         
         
															 
                     
                     
                     
                    


































 
    
    
        