ಉಕ್ರೇನ್: ಪ್ರಧಾನಿ ಮೋದಿ ರಷ್ಯಾ ಪ್ರವಾಸದ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಸಮಾಧಾನ ಹೊರ ಹಾಕಿದ್ದಾರೆ. ಭಾರತದ ಪ್ರಧಾನಿ ಪ್ರಪಂಚದ ಅತಿದೊಡ್ಡ ಕೊಲೆಗಡುಕನನ್ನು ಆಲಂಗಿಸಿಕೊಂಡಿದ್ದಾರೆ ಎಂದು ಪುಟಿನ್ ವಿರುದ್ಧ ಕಿಡಿಕಾರಿದ್ದಾರೆ. ಮೋದಿಯವರ ಮಾಸ್ಕೋ ಭೇಟಿ ನಿರಾಶದಾಯಕ ಮತ್ತು ಶಾಂತಿ ಪ್ರಯತ್ನಗಳ ಮೇಲಿನ ಬಹುದೊಡ್ಡ ಹೊಡೆತ ಎಂದು ಕರೆದಿದ್ದಾರೆ. ನಿನ್ನೆ ಪ್ರಧಾನಿ ಮೋದಿ ರಷ್ಯಾಗೆ ತೆರಳಿದ್ದು, ಅಲ್ಲಿ ಪುಟಿನ್ ಅವರನ್ನು ಅಪ್ಪಿಕೊಂಡು ಸ್ವಾಗತಿಸಿದ್ದರು. ಈ ಫೊಟೋ ಸಾಮಾಜಿಕ ಜಾಲತಾಣ ವೈರಲ್ ಆಗಿತ್ತು. ಇನ್ನು ಮೋದಿ ಭೇಟಿಗೂ ಕೆಲವೇ ಗಂಟೆ ಮುನ್ನ, ಅಂದರೆ ಸೋಮವಾರ ಮುಂಜಾನೆ ರಷ್ಯಾದ ಕ್ಷಿಪಣಿಗಳು ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದ್ದು, ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 170 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಝೆಲೆನ್ಸ್ಕಿ, ನರೇಂದ್ರ ಮೋದಿಯನ್ನು ಗುರಿಯಾಗಿಸಿಕೊಂಡು ಪುಟಿನ್ ಅವರನ್ನು ಕೊಲೆಗಾರ ಎಂದು ಕರೆದಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕ ಮಾಸ್ಕೋದಲ್ಲಿ ವಿಶ್ವದ ಅತ್ಯಂತ ರಕ್ತಸಿಕ್ತ ಅಪರಾಧಿಯನ್ನು ಅಪ್ಪಿಕೊಳ್ಳುವುದನ್ನು ನೋಡುವುದು ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.
