ಖಾಸಗಿ ಶಾಲೆಯಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊಡಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆ, ಅನುದಾನಿತ ಶಾಲೆಯಲ್ಲಿ ಮಾತ್ರ
ನಾಡಗೀತೆ ಹಾಡಬೇಕು ಎಂದು ಕನ್ನಡ& ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆ ಆರಂಭವಾಗುವ ಮುನ್ನ ನಾಡಗೀತೆ ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರ, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮ ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.