ಕೋಲ್ಕತ್ತಾ: ಭಾರತೀಯ ಪಾಪ್ ಐಕಾನ್, ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೋ ಉತ್ತುಪ್ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.
ಜಾನಿ ಚಾಕೋ ಉತ್ತುಪ್ ಅವರಿಗೆ 78 ವರ್ಷ ವಯಸ್ಸಾಗಿತ್ತು. ತಮ್ಮ ನಿವಾಸದಲ್ಲಿ ಟಿವಿ ನೋಡುವಾಗ ಸ್ಥಳದಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ದಂಪತಿಗೆ ಮಗ ಒಬ್ಬ ಮಗ ಹಾಗೂ ಮಗಳು ಇದ್ದರು. ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.