ಹೊಸಪೇಟೆ : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ದಿವಾಕರ ಎಂ.ಎಸ್. ಅವರು ಆದೇಶಿಸಿದ್ದಾರೆ.
ಕೂಡ್ಲಿಗಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಕೂಡ್ಲಿಗಿ, ಕೊಟ್ಟೂರು, ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.23ರ ಬೆಳಿಗ್ಗೆ 6 ರಿಂದ ಸೆ.24ರ ಬೆಳಿಗ್ಗೆ 6 ಗಂಟೆಯವರೆಗೆ,
ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ ನಗರ ಭಾಗದಲ್ಲಿ ಸೆ.26ರ ಬೆಳಿಗ್ಗೆ 6 ರಿಂದ ಸೆ .27ರ ಬೆಳಿಗ್ಗೆ 6 ಗಂಟೆಯವರೆಗೆ,
ಹರಪನಹಳ್ಳಿ ಉಪವಿಭಾಗದಲ್ಲಿ ವ್ಯಾಪ್ತಿಯಲ್ಲಿ ಬರುವ ಹರಪನಹಳ್ಳಿ ಪಟ್ಟಣದಲ್ಲಿ ಸೆ.29ರ ಬೆಳಿಗ್ಗೆ 6 ರಿಂದ ಸೆ.30ರ ಬೆಳಿಗ್ಗೆ 6 ಗಂಟೆಯವರೆಗೆ,
ಹೂವಿನಹಡಗಲಿ ಪಟ್ಟಣ ಹಾಗೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.30ರ ಬೆಳಿಗ್ಗೆ 6 ಗಂಟೆಯಿಂದ ಅ.1ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮಾಡದಂತೆ ಹಾಗೂ ಬಾರ್, ರೆಸ್ಟೋರೆಂಟ್ಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದ್ದಾರೆ.
 
				 
         
         
         
															 
                     
                     
                    


































 
    
    
        