ಹುಬ್ಬಳ್ಳಿ : ಉಪಚುನಾವಣೆಗೆ ಸಂಬಂಧಿಸಿ ನಮಗೆ ಚನ್ನಪಟ್ಟಣ ಕ್ಷೇತ್ರದ ಬಗ್ಗೆಎನ್ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇವೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿ ದೇವೇಗೌಡರು 62 ವರ್ಷಗಳಿಂದ ಕ್ಷೇತ್ರ ಉಳಿಸಿಕೊಂಡಿದ್ದಾರೆ ಎಂದು ಹೇಳಿದರು. ಇಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈ ವೇಳೆ ಅವರು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧವಾದ್ದೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಗಳ ಗೆಲುವಿಗೆ ನಾವು ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.