ಛತ್ತೀಸ್‌ಗಢ : ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಐಇಡಿ ಸ್ಫೋಟ ಸಂಭವಿಸಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿ ಗಾಯಗೊಂಡ ಘಟನೆ ಜಿಲ್ಲೆಯ ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂಗೇಲೂರು ಸಿಆರ್‌ಪಿಎಫ್ ಶಿಬಿರದಿಂದ ಭದ್ರತಾ ಸಿಬ್ಬಂದಿ ನೆಲಬಾಂಬ್ ತೆಗೆಯಲು ಹೊರಟಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಇಡಿಗೆ ಸಂಪರ್ಕಗೊಂಡಿರುವ ತಂತಿಯನ್ನು ಭದ್ರತಾ ಸಿಬ್ಬಂದಿ ಪತ್ತೆ ಮಾಡಿದ್ದಾರೆ. ಬಳಿಕ ಅವರು ಐಇಡಿಗಳನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ವಿಲೇವಾರಿ ಮಾಡಲು ಆರಂಭಿಸಿದರು. ಸ್ಫೋಟದ ಬಳಿಕ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಿಜಾಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.