ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಶೇಷ ಸ್ಥಾನಮಾನ ರದ್ದತಿ ನಿರ್ಧಾರ ಸಂಬಂಧ ಹಲವಾರು ಪರ- ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಪಾಕಿಸ್ತಾನವೂ ಧ್ವನಿಗೂಡಿಸಿದೆ.
370 ನೇ ವಿಧಿ ರದ್ದತಿ ಸಂಬಂಧ ಪ್ರತಿಕ್ರಿಯಿಸಿರುವ ಪಾಕ್ ವಿದೇಶಾಂಗ ಸಚಿವಾಲಯ, ಭಾರತದ ಸುಪ್ರೀಂ ಕೋರ್ಟ್ ವಿಶ್ವಸಂಸ್ಥೆಯ ನಿರ್ಣಯಗಳಿಗೆ ವಿರುದ್ಧವಾಗಿ ನಿರ್ಧಾರವನ್ನು ನೀಡುವ ಮೂಲಕ ಅಂತಾರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿದೆ.
ಅಷ್ಟೆ ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ವಿವಾದಿತ ಪ್ರದೇಶ ಇದನ್ನು ಅಂತಾರಾಷ್ಟ್ರೀಯ ಕಾನೂನು ಗುರುತಿಸುವುದಿಲ್ಲ ಎಂದು ಪ್ರತಿಪಾದಿಸಿದೆ.
ಭಾರತೀಯ ಸುಪ್ರೀಂ ಕೋರ್ಟ್‌ನ ನ್ಯಾಯಾಂಗ ಅನುಮೋದನೆಯು ಯಾವುದೇ ಕಾನೂನು ಮೌಲ್ಯವನ್ನು ಹೊಂದಿಲ್ಲ ಎಂದು ಪಾಕಿಸ್ಥಾನದ ಉಸ್ತುವಾರಿ ವಿದೇಶಾಂಗ ಸಚಿವ ಜಲೀಲ್ ಅಬ್ಬಾಸ್ ಜಿಲಾನಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.