ನವದೆಹಲಿ: ಬಹು ನಿರೀಕ್ಷಿತ ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿದ್ದಾರೆ.
ಆದರೆ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ಸ್ಥಾನವನ್ನು ನೀಡದೇ ಇರುವುದು ಶಾಕಿಂಗ್ ವಿಚಾರವಾಗಿದೆ. ಇನ್ನು ಸಂಜು ಸ್ಯಾಮ್ಸನ್, ರಿಷಬ್ ಪಂತ್ ಅವರು ವಿಕೆಟ್ ಕೀಪರ್, ಬ್ಯಾಟರ್ಗಳಾಗಿ ಗುರುತಿಸಿಕೊಂಡರೆ, ಹಾರ್ದಿಕ್ ಪಾಂಡ್ಯ ಅವರಿಗೆ ಉಪ ನಾಯಕ ಪಟ್ಟವನ್ನು ನೀಡಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್