ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.15ರಂದು ಹೈಕೋರ್ಟ್ನಲ್ಲಿ ನಡೆಯಲಿದೆ.
ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ ಹಾಗೂ ಆಚರಣೆಯ ಭಾಗ. ಹಾಗಾಗಿ ಹಿಂದೂ ಧರ್ಮದ ಬಗ್ಗೆ ನಂಬಿಕೆಯಿಲ್ಲದ ಅನ್ಯಧರ್ಮದವರಾದ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಮಾಜಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರು ನಿವಾಸಿಗಳಾದ ಎಚ್.ಎಸ್ ಗಿರೀಶ್, ಉದ್ಯಮಿ ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್. ಸೌಮ್ಯಾ ಅವರು ಪ್ರತ್ಯೇಕ ೩ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಗಳು ಮುಖ್ಯ ನ್ಯಾ. ವಿಭು ಬಖ್ರು ಹಾಗೂ ನ್ಯಾ. ಸಿ.ಎಂ ಜೋಷಿ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆಯಲಿವೆ.