ದೆಹಲಿ: ಕಾಂಗ್ರೆಸ್ ಪಕ್ಷವು ದೆಹಲಿ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ಅವರನ್ನು ನೇಮಕ ಮಾಡಿದೆ.
ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅರವಿಂದರ್ ಸಿಂಗ್ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ದೇವೇಂದ್ರ ಯಾದವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ದೇವೇಂದ್ರ ಅವರನ್ನಾಗಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಿಸಿದ್ದಾರೆ.
ದೆಹಲಿ ಕಾಂಗ್ರೆಸ್ ಘಟಕವು ಎಎಪಿ ಜೊತೆಗಿನ ಮೈತ್ರಿಗೆ ವಿರುದ್ಧವಾಗಿತ್ತು ಆದರೆ ಪಕ್ಷದ ಹೈಕಮಾಂಡ್ ಅನ್ನು ಮುಂದುವರೆಸಿದೆ ಎಂಬ ಕಾರಣಕೊಟ್ಟು ಅರವಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು.