ಉತ್ತರಪ್ರದೇಶ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 27 ಜನ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.
ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ ಮೃತಪಟ್ಟಿದ್ದಾರೆ ಎಂದು ಹತ್ರಾಸ್ ಎಎಸ್ಪಿ ಮಾಹಿತಿ ನೀಡಿದ್ದಾರೆ.
ಈ ಘಟನೆ ಹತ್ರಾಸ್ ಜಿಲ್ಲೆಯ ಮೋಘಲ್ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಬಾಬಾ ಅವರ ಧಾರ್ಮಿಕ ಕಾರ್ಯಕ್ರಮದಲ್ಲಿ ನಡೆದಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇಥಹಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.!