ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಅರ್ಜಿ ವಿಚಾರಣೆಯನ್ನು ಅ.8 ಕ್ಕೆ ಮುಂದೂಡಲಾಗಿದೆ.
ಇಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘ ವಾದ ಮಂಡಿಸಿದರು. ಪ್ರತಿವಾದಕ್ಕೆ ಎಸ್‌ಪಿಪಿ ಅವಕಾಶ ಕೇಳಿದರು. ಹೀಗಾಗಿ ವಿಚಾರಣೆಯನ್ನು ಮಂಗಳವಾರಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ.ಇನ್ನು ಆರೋಪಿಗಳಾದ ಪವಿತ್ರಾಗೌಡ ಮತ್ತು ರವಿಶಂಕರ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮಂಗಳವಾರಕ್ಕೆ ಮುಂದೂಡಲಾಗಿದೆ.