ಬೆಂಗಳೂರು: ರಾಜ್ಯದಲ್ಲಿ ಸಿಬಿಐಗೆ ಇದ್ದ ಮುಕ್ತ ಅಧಿಕಾರವನ್ನ ಹಿಂಪಡೆಯಲಾಗಿದೆ, ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಂಪುಟ ನಿರ್ಣಯವನ್ನವನ್ನ ಟೀಕಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು ನಿಮಗೂ ಭಯವಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕುಟ್ಟುಕಿದ್ದಾರೆ. ತಮ್ಮ X ಖಾತೆಯ ಮೂಲಕ ರಾಜ್ಯ ಸಂಪುಟ ಸಭೆಯ ನಿರ್ಣಯವನ್ನ ವ್ಯಂಗ್ಯವಾಗಿ ಟೀಕಿಸಿದ್ದಾರೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು.ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಲೇವಡಿ ಮಾಡಿದ್ದಾರೆ. ಕರ್ಮ ಹಿಟ್ ಬ್ಯಾಕ್ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ,ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ.ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಹೇಳಿದ್ದಾರೆ. ಮುಡಾ ಹಗರಣವನ್ನ ಸಿಬಿಐ ತನಿಖೆ ಮಾಡಿಸಬೇಕು ಎಂಬ ವಿಪಕ್ಷಗಳ ಆಗ್ರಹಕ್ಕೆ ರಾಜ್ಯದಲ್ಲಿ ಮುಕ್ತ ಸಿಬಿಐ ಮೂಲಕ ತನಿಖೆಗೆ ಬ್ರೇಕ್ ಹಾಕಿದ್ದೀರಾ ಅಲ್ವಾ ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.ನಿಮಗೂ ಭಯವಿದೆ ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ ಎಂದು ಸಿಎಂಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
