ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದ 11 ಕೆ.ವಿ ಮಾರ್ಗಗಳ ನಿರ್ವಹಣಾ ಕಾರ್ಯಕ್ಕಾಗಿ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11 ಕೆ.ವಿ ಮಾರ್ಗಗಳಲ್ಲಿ ಇದೇ ಡಿ.17ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ವಿದ್ಯಾನಗರ, ಜೆ.ಸಿ.ಆರ್, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ ಏರಿಯಾ. ಯುನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.