ನೈರೋಬಿ: ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನ ಮೃತಪಟ್ಟಿದ್ದಾರೆ. ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಶುಕ್ರವಾರ ಸಂಜೆ ರಸ್ತೆ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿಗಳ ಮೇಲೆ ಹರಿದಿದೆ. ಈ ಪರಿಣಾಮ ಸ್ಥಳದಲ್ಲೇ 48 ಜನ ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಪಷ್ಟ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ಟಾಮ್ ಒಡೆರಾ ಅಸೋಸಿಯೇಟೆಡ್ ತಿಳಿಸಿದ್ದಾರೆ.
ಅಗ್ನಿವೀರ್ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿ: ಜುಲೈ 17 ರಿಂದ 25 ರವರೆಗೆ ನಡೆಯಲಿದೆ ನೇಮಕಾತಿ
ಸ್ಥಳೀಯ ಮಾಧ್ಯಮಗಳು ಉಲ್ಲೇಖಿಸಿದ್ದಂತೆ, ಟ್ರಕ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಘಟನೆಯ ವಿಡಿಯೋ, ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
				
															
                    
                    
                    
                    
                    

































