ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದ್ದು ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂದನ ವಿಧಿಸಿ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸೋಮವಾರ ಪರಪ್ಪಹನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ವಿಶೇ಼ಷ ಭದ್ರತಾ ವಿಭಾಗದ ಸೆಲ್ ನಲ್ಲಿ ಇಟ್ಟಿದ್ದಾರೆ. ವಿಚಾರಣಾಧೀನ ಕೈದಿ ಸಂಖ್ಯೆ 5664
ಅನ್ನು ಪ್ರಜ್ವಲ್ ಅವರಿಗೆ ಕಾರಾಗೃಹದ ಅಧಿಕಾರಿಗಳು ನೀಡಿದ್ದಾರೆ.
ಎಸ್ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನಿನ್ನೆ ಎಸ್ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ
				
															
                    
                    
                    
                    
                    
































