ಬೆಂಗಳೂರು : ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು, ಪ್ರತಿ ಭಾರಿ ಪಿಎಂ ಬಂದಾಗ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಈ ಬಾರಿ ಭೇಟಿ ಗೆ ಅವಕಾಶ ಸಿಗದ ಹಿನ್ನಲೆ ರಸ್ತೆಯಲ್ಲಿ ಬ್ಯಾರಿಕೇಡ್ ಹೊರಗಡೆ ಸಾರ್ವಜನಿಕರಂತೆ ನಿಂತು ಮೋದಿಗೆ ಕೈಬೀಸಿದ ಘಟನೆ ನಡೆದಿದ್ದು, ಸದ್ಯ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಮುನಿರತ್ನ, ಕೆ. ಗೋಪಾಲಯ್ಯ , ಆರ್ ಅಶೋಕ್ ಕಾಣಿಸಿಕೊಂಡಿದ್ದಾರೆ. ನಾಲ್ವರು ಮುಖಂಡರು ಬ್ಯಾರಿಕೇಡ್ ಆಚೆ ನಿಂತು ಪ್ರಧಾನಿ ಮೋದಿಗೆ ಕೈ ಬೀಸಿದ್ದಾರೆ. ಅದರಲ್ಲೂ ಮುನಿರತ್ನ ಬ್ಯಾರಿಕೇಡ್ ಮೇಲೆ ಹೆಜ್ಜೆ ಇಟ್ಟು ಪ್ರಧಾನಿಗೆ ಕೈ ಬೀಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ.
ಈ ಪೋಟೋ ಕುರಿತಂತೆ ಕಾಂಗ್ರೇಸ್ ವ್ಯಂಗ್ಯವಾಡಿದ್ದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಟ್ವೀಟ್ ಮೂಲಕ ಟೀಕೆ ವ್ಯಕ್ತಪಡಿಸಿದ್ದಾರೆ. ಹಲವಾರು ನೆಟ್ಟಿಗರು ಬಿಜೆಪಿ ಮುಖಂಡರಿಗೆ ಈ ರಿತಿ ಪರಿಸ್ಥಿತಿ ಬರಬಾರದಿತ್ತು ಅಂತ ಕಮೆಂಟ್ ಮಾಡಿದ್ದಾರೆ.