ಪಿಎಸ್ಐ ನೇಮಕಾತಿ ಹಗರಣದ (PSI Recruitment Scam) ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅವರಿಗೆ ಕಳೆದ ಸೋಮವಾರ ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎ.ನವಾಜ್ ಅವರ ಏಕಸದಸ್ಯ ಪೀಠ ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಆದೇಶದ ಪ್ರತಿ ತಲುಪಿದ್ದರಿಂದ ನಿನ್ನೆ ಆರೋಪಿಗೆ ಆರು ತಿಂಗಳ ಬಳಿಕ ಜೈಲು ಬಂಧನದಿಂದ ಮುಕ್ತಿ ಸಿಕ್ಕಂತಾಗಿದೆ. ಅನುಮತಿ ಇಲ್ಲದೇ ವಿದೇಶಕ್ಕೆ ತೆರಳುವಂತಿಲ್ಲ ಇತ್ಯಾದಿ ಷರತ್ತುಗಳನ್ನು ವಿಧಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರೋ ಆರೋಪ ಕೇಳಿ ಬಂದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಾರ್ಚ್ನಲ್ಲಿ ಅಮೃತ್ ಪೌಲ್ ಬಂಧನವಾಗಿತ್ತು. ಪಿಎಸ್ಐ ನೇಮಕಾತಿ ಸಂದರ್ಧದಲ್ಲಿ ಅಮೃತ್ ಪೌಲ್ ಎಡಿಜಿಪಿ ಆಗಿದ್ದರು. ಇನ್ನು ಅಮೃತ್ ಪೌಲ್ ವಿರುದ್ಧ ಆರೋಪ ಕೇಳಿ ಬರುತ್ತಿದ್ದಂತೆ ಅಂದಿನ ಬಿಜೆಪಿ ಸರ್ಕಾರ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಇದೇ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ಸಿಬ್ಬಂದಿಯನ್ನು ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದರು.
ಅಕ್ರಮ ನಡೆದಿದ್ದ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಸ್ಥೆ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಹ ಬಂಧಿಸಲಾಗಿತ್ತು. ತದನಂತರ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡು ರಾಜ್ಯದಲ್ಲಿ ಸಂಚಲನವೇ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮತ್ತೆ ಸದ್ದು ಮಾಡುತ್ತಿದೆ.