ಬೆಂಗಳೂರು:. ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರದಿದೆ.ಸದ್ಯ ಭಾರೀ ಅನಾಹುತ ತಪ್ಪಿದ್ದು ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೆಕ್ಯೂರಿಟೀಸ್ಗಳನ್ನ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶಾಪ್, ಕೋಚಿಂಗ್ ಸೆಂಟರ್, ಐಟಿ ಕಂಪನಿಯ ದಾಖಲೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.


































