ಚಿತ್ರದುರ್ಗ: 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ಬಿ.ಐ.ಇ.ಆರ್.ಟಿ ಹುದ್ದೆಗೆ ಸ್ಪೆಷಲ್ ಡಿ.ಇಡಿ ಹಾಗೂ ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ನೇರಗುತ್ತಿಗೆ ಮೂಲಕ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇದೇ ಜೂನ್ 7ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಇಲಾಖೆಗೆ ಅಥವಾ ದೂರವಾಣಿ ಸಂಖ್ಯೆ 8747912806 ಮತ್ತು 8073269824 ಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































