ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿತು. ಇದು ದೇಶದ ಬಡ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸುವ ಯೋಜನೆಯಾಗಿದೆ.
ಈ ಯೋಜನೆಯ ಅಡಿಯಲ್ಲಿ ವಾರ್ಷಿಕವಾಗಿ 3 ಸಿಲಿಂಡರ್ ಉಚಿತವಾಗಿ ಸಿಗುತ್ತದೆ. www.pmuy.gov.in ಸೈಟ್ಗೆ ಹೋಗಿ ಅರ್ಜಿ ಸಲ್ಲಿಸಬೇಕು.
ಇದಕ್ಕೆ ಬಿಪಿಎಲ್ ಪಡಿತರ ಚೀಟಿ ಹೊಂದುವುದು ಕಡ್ಡಾಯವಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು.