ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಿಬಿಎಂಪಿ ಕಸದ ಲಾರಿ ಪಾರ್ಕಿಂಗ್ ಮಾಡಿದ್ದ ಕಾರಣ ನವ ವಿವಾಹಿತ ಬಲಿಯಾಗಿದ್ದಾರೆ.
ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ನಿಯಂತ್ರಣ ಸಿಗದೆ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದು ಬೈಕ್ ಸಮೇತ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
				
															
                    
                    
                    
                    

































