ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಮತ್ತೊಂದು ವಿವಾದ ಶುರುವಾಗಿದೆ.
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ, ಆದರೆ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಎಂದು ಮತ್ತೊಂದು ವಿವಾದ ರಾಜ್ಯ ಸರ್ಕಾರ ಆದೇಶ ಮಾಡುವ ಮೂಲಕ ಸೃಷ್ಟಿಸಿದೆ. ಖಾಸಗಿ ಶಾಲೆಗಳಲ್ಲಿ ಕಾಂಗ್ರೆಸ್ ಸರ್ಕಾರ ವಿನಾಯತಿ ನೀಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಾದಿತ ಆದೇಶ ಹೊರಡಿಸಲಾಗಿದೆ.