ನಿಮ್ಮ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ಶುಲ್ಕ ವಿಧಿಸಲಾಗುತ್ತದೆ. ಹೀಗಾಗಿ ನೀವು 2 ಅಥವಾ 3 ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಕಷ್ಟಕರವಾಗಿರುತ್ತದೆ.
ದೀರ್ಫಾವಧಿಯವರೆಗೆ ಖಾತೆಯನ್ನು ಬಳಸದಿದ್ದರೆ ಹಲವಾರು ಶುಲ್ಕಗಳನ್ನು ವಿಧಿಸಲಾಗುತ್ತದೆ. ಆದ್ದರಿಂದ, ಬ್ಯಾಂಕ್ ಸೇವೆಗಳು ಮತ್ತು ಶುಲ್ಕಗಳ
ಬಗ್ಗೆ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ಮರೆಯದಿರಿ. ಅಗತ್ಯವಿದ್ದರೆ ಮಾತ್ರ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ತೆರೆಯಿರಿ.