ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ.
ಇನ್ಮುಂದೆ ರಾಜ್ಯದಲ್ಲಿ ಎಲ್ಲಿಯಾದರೂ ಭ್ರೂಣ ಹತ್ಯೆ ನಡೆಯುವಂತಹ ಕೆಲಸಗಳು ನಡೆಯುತ್ತಿದ್ದರೆ, ಅದರ ಬಗ್ಗೆ ಸೂಕ್ತ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡಲಾಗುವುದು ಎಂದು ಇಲಾಖೆ ಘೋಷಿಸಿದೆ.
ಅಲ್ಲದೆ, ಮಾಹಿತಿ ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು ಎಂದೂ ಹೇಳಿದೆ. ಈ ಮೂಲಕ ಈ ಹತ್ಯೆಯನ್ನು ಬುಡಸಮೇತವನ್ನೇ ಕಿತ್ತು ಹಾಕಲು ಸರ್ಕಾರ ತೀರ್ಮಾನಿಸಿದೆ.