ಮಂಗಳೂರು: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು(ಮಾ.04) ನಡೆದಿದೆ.
ಘಟನೆಯಲ್ಲಿ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆದಿದ್ದು, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯವಾಗಿದೆ. ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದೆ. ಇನ್ನು ಆರೋಪಿ ಕೇರಳದಾತ ಎಂಬುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.