ನವದೆಹಲಿ: ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತ ಸುದ್ದಿ ವಾಹಿನಿಗಳ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ.
ಜನ ಮತ ಚಲಾಯಿಸಿದ್ದಾರೆ ಮತ್ತು ಫಲಿತಾಂಶ ಜೂನ್ 4ರಂದು ಬರಲಿದೆ. ಊಹಾಪೋಹದಲ್ಲಿ ತೊಡಗಿ, ಟಿಆರ್ಪಿ ಕದನದಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣ ಗೋಚರಿಸುತ್ತಿಲ್ಲ’ ಎಂದು ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಪವನ್ ಖೇರಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷವು ಮತಗಟ್ಟೆ ಸಮೀಕ್ಷೆಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಯಾವುದೇ ಚರ್ಚೆಯ ಗುರಿ, ಜನರಿಗೆ ಮಾಹಿತಿ ನೀಡುವುದು. ಜೂನ್ 4ರ ನಂತರ ನಾವು ಚರ್ಚೆಗಳಲ್ಲಿ ಸಂತೋಷದಿಂದ ಭಾಗವಹಿಸುತ್ತೇವೆ’ ಎಂದು ಉಲ್ಲೇಖಿಸಿದ್ದಾರೆ.
ಪಕ್ಷದೊಳಗೆ ಆಂತರಿಕವಾಗಿ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.