ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಮನೆಯ ಊಟ ಬೇಕೆಂದು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮನೆ ಊಟದೊಂದಿಗೆ, ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ನೀಡುವಂತೆಯೂ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆ ಮಾಡುವಂತೆ ವಕೀಲರು ಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ.
ಜೈಲಿನಲ್ಲಿ ನೀಡುತ್ತಿರುವ ಊಟ ನನಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದ ಬಳಿಕ ಅತಿಸಾರ, ಭೇದಿ ಉಂಟಾಗುತ್ತಿದೆ. ಜೈಲಿನ ಆಹಾರ ಸರಿಹೊಂದದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ದರ್ಶನ್ ಹೈಕೋರ್ಟ್ಗೆ ತಿಳಿಸಿದ್ದಾರೆ. ಇನ್ನು ಅರ್ಜಿ ವಿಚಾರಣೆಯು ಜುಲೈ 11ರಂದು ನಡೆಯುವ ಸಾಧ್ಯತೆ ಇದೆ